Monday, December 31, 2012
ಖಾದ್ರಿಗೆ ಕೃಷಿ ಋಷಿ ಪ್ರಶಸ್ತಿ ಪ್ರದಾನ
Location: BIDAR, Bidar, Karnataka, India
Bidar, Karnataka, India
ಬಸವಕಲ್ಯಾಣ ಶಾಸಕ ಅಟ್ಟೂರ ರಾಜೀನಾಮೆ
ಜನಸ್ನೇಹಿ ಯಾತ್ರೆಯಲ್ಲಿ ಭಾಗವಹಿಸಲು ಬಸವಕಲ್ಯಾಣಕ್ಕೆ ಆಗಮಿಸಿದ್ದ ಮಾಜಿ ಸಿಎಂ, ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ಬಸವಕಲ್ಯಾಣದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಅಟ್ಟೂರ, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಷಯ ಪ್ರಕಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಟ್ಟೂರ, 'ಬಿಜೆಪಿಯಲ್ಲಿ ಇದ್ದುಕೊಂಡು ಕೆಜೆಪಿಯ ಸಭೆ, ಸಮಾವೇಶಗಳಲ್ಲಿ ಭಾಗವಹಿಸುವುದು ಸರಿಯಲ್ಲ. ಹೀಗಾಗಿ ನೈತಿಕ ಹೊಣೆ ಹೊತ್ತು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ರಾಜೀನಾಮೆ ಪತ್ರವನ್ನು ಶುಕ್ರವಾರ ಸಂಜೆಯೇ ವಿಧಾನಸಭಾಧ್ಯಕ್ಷರಿಗೆ ಫ್ಯಾಕ್ಸ್ ಮೂಲಕ ರವಾನಿಸಿದ್ದೇನೆ. ಜನವರಿ 5ರಂದು ಬೆಂಗಳೂರಿನಲ್ಲಿ ಖುದ್ದಾಗಿ ವಿಧಾನಸಭಾಧ್ಯಕ್ಷರನ್ನು ಭೇಟಿ ಮಾಡಿ ಮತ್ತೂಮ್ಮೆ ರಾಜೀನಾಮೆ ಪತ್ರ ನೀಡುತ್ತೇನೆ' ಎಂದರು.
'ಯಡಿಯೂರಪ್ಪ ದೊಡ್ಡ ಶಕ್ತಿಯಾಗಿ ಬೆಳೆದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಅವರು ನನ್ನನ್ನು ಗುರ್ತಿಸಿ ಬಿಜೆಪಿಯಿಂದ ಟಿಕೆಟ್ ನೀಡಿದ್ದಕ್ಕಾಗಿಯೇ ಇಂದು ನಾನು ಶಾಸಕನಾಗಿ ಆಯ್ಕೆಯಾಗಿದ್ದೇನೆ. ಕಷ್ಟವಿರಲಿ, ಸುಖವಿರಲಿ ನಾನು ಯಡಿಯೂರಪ್ಪ ಅವರೊಂದಿಗೆ ಇರುತ್ತೇನೆ. ಸ್ವ-ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ' ಎಂದು ಪ್ರತಿಕ್ರಿಯಿಸಿದರು.
ಬಿಜೆಪಿಯಲ್ಲಿ ಇದ್ದುಕೊಂಡು ಕೆಜೆಪಿಯ ಸಭೆ, ಸಮಾವೇಶಗಳಲ್ಲಿ ಭಾಗವಹಿಸುವುದು ಸರಿಯಲ್ಲ. ಹೀಗಾಗಿ ನೈತಿಕ ಹೊಣೆ ಹೊತ್ತು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ರಾಜೀನಾಮೆ ಪತ್ರವನ್ನು ಶುಕ್ರವಾರ ಸಂಜೆಯೇ ವಿಧಾನಸಭಾಧ್ಯಕ್ಷರಿಗೆ ಫ್ಯಾಕ್ಸ್ ಮೂಲಕ ರವಾನಿಸಿದ್ದೇನೆ.
ಬಸವರಾಜ ಪಾಟೀಲ ಅಟ್ಟೂರ, ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ.
Tuesday, December 18, 2012
ಉ.ಕರ್ನಾಟಕ ಜನತೆ ಫುಲ್ ಖುಷ್: ಕಲಂ 371 ಗೆ ಸಂಸತ್ ಅಸ್ತು
ಉತ್ತರ ಕರ್ನಾಟಕ ಜನತೆಯ ನಾಲ್ಕು ದಶಕಗಳ ಕನಸು ಇಂದು ನನಸಾಗುವ ಮೂಲಕ ರಾಜ್ಯದಾದ್ಯಂತ ಅದರಲ್ಲೂ ಉತ್ತರ ಕರ್ನಾಟಕ ಭಾಗದ ಜನತೆ ಸಂಭ್ರಮಾಚರಣೆಯಲ್ಲಿ ತೊಡಗುವಂತೆ ಮಾಡಿದೆ.
ಇಂದು ಲೋಕಸಭೆಯಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತಾದ ಕಲಂ 371 ತಿದ್ದುಪಡಿ ಮಸೂದೆ ಅಂಗೀಕಾರವಾಗುವ ಮೂಲಕ ಅಭಿವೃದ್ಧಿ ವಿಚಾರದಲ್ಲೂ ನಿರ್ಲಕ್ಷ್ಯಕ್ಕೊಳಗಾಗಿದ್ದೇವೆಂಬ ಭಾವನೆಯಲ್ಲಿದ್ದ ಉತ್ತರ ಕರ್ನಾಟಕದ ಜನತೆಗೆ ಸಮಾಧಾನದ ನಿಟ್ಟುಸಿರು ಬಿಡುವಂತೆ ಮಾಡಿದೆ.
ಮಸೂದೆ ಅಂಗೀಕಾರವಾಗುವ ಹಂತದಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದ ರಾಜ್ಯ ಸರಕಾರ, ಕೇಂದ್ರ ಸರಕಾರಕ್ಕೆ ಪತ್ರಬರೆದು ಮಸೂದೆ ಕುರಿತು ನನ್ನ ಅಭಿಪ್ರಾಯ ಕೇಳಿಲ್ಲವೆಂದು ತಗಾದೆ ತೆಗೆದಿದ್ದ ಹಿನ್ನಲೆಯಲ್ಲಿ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಳ್ಳುವುದೋ ಇಲ್ಲವೋ ಎನ್ನುವ ಆತಂಕ ಉತ್ತರ ಕರ್ನಾಟಕದ ಜನತೆಯನ್ನು ಕಾಡಿತ್ತು. ರಾಜ್ಯ ಸರಕಾರದ ಕ್ರಮಕ್ಕೆ ತೀವ್ರ ಆಕ್ರೋಶವಾಗಿತ್ತಲ್ಲದೇ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬಂದಿತ್ತು.
ಜನತೆಯ ಆಕ್ರೋಶದಿಂದ ಎಚ್ಚೆತ್ತುಗೊಂಡ ರಾಜ್ಯ ಸರಕಾರ ತಕ್ಷಣವೆ ಕೇಂದ್ರಕ್ಕೆ ಪತ್ರ ಬರೆದು, ಪ್ರಸಕ್ತ ಅಧಿವೇಶನದಲ್ಲಿಯೇ ಮಸೂದೆ ಅಂಗೀಕಾರಕ್ಕೆ ಮನವಿ ಮಾಡಿದ್ದಲ್ಲದೇ ಆಕ್ಷೇಪಣೆಯನ್ನು ಹಿಂದಕ್ಕೆ ಪಡೆದಿತ್ತು.
ಅದರಂತೆ, ಇಂದು ಲೋಕಸಭೆಯಲ್ಲಿ ಕಲಂ 371(ಡಿ) ಮಸೂದೆ ಮಂಡನೆಯಾದ ವೇಳೆ ಮಸೂದೆ ಪರವಾಗಿ 342 ಮತಗಳು ಬಂದವು ವಿರೋಧವಾಗಿ ಇತರ ಪಕ್ಷಗಳು ಕೂಡಾ ಮತ ಚಲಾಯಿಸದಿರುವುದು ವಿಶೇಷವಾಗಿತ್ತು.
ಕಲಂ 371(ಡಿ) ಮಸೂದೆ ಜಾರಿಯಿಂದಾಗಿ ಉತ್ತರ ಕರ್ನಾಟಕ ಭಾಗಕ್ಕೆ ಕೇಂದ್ರ ಸರಕಾರದಿಂದ ವಿಶೇಷ ಅನುದಾನ ದೊರೆಯುವುದಲ್ಲದೇ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ದೊರೆಯಲಿದೆ.
Source:http://kannada.webdunia.com/newsworld/news/national/1212/18/1121218032_1.htm

Subscribe to:
Posts (Atom)